Coastal Bulletin

ಮೈಸೂರು : ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿಯನ್ನು ಅರಮನೆಗೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಡೋಲು ಬಡಿದು, ಕಂಸಾಳೆಯಾಡಿ, ಕಲಾವಿದರೊಂದಿಗೆ ವೀರಗಾಸೆ ಕುಣಿತ ಕುಣಿಯುವ ಮೂಲಕ ಗಮನ ಸೆಳೆದರು. 

ಅರಮನೆ ಆವರಣದಲ್ಲಿ ನೆರೆದಿದ್ದ ಕಲಾತಂಡಗಳ ಜೊತೆ ಕಲಾವಿದರಂತೆಯೇ ಡೋಲು ಬಾರಿಸಿದರು. ವೀರಗಾಸೆ ಕುಣಿತ ಮಾಡುವ ಕಲಾವಿದರನ್ನು ಹುರಿದುಂಬಿಸುವುದರ ಜೊತೆಗೆ ತಮ್ಮಲ್ಲಿನ ಜಾನಪದ ಕಲೆಯನ್ನು ಕೂಡ ಪ್ರದರ್ಶಿಸಿದರು. 

ಪೂಜಾ ಕುಣಿತ, ಗೊಂಬೆ ಕುಣಿತ ನೋಡಿದ ಸಚಿವರು ಅವರೊಂದಿಗೆ

ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ಸಚಿವರ ಕುಣಿತ, ಡೋಲು ಬಡಿತವನ್ನು ಕಂಡ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಕೂಡ ತಮಟೆ ಬಾರಿಸಿದರು. ಬೆಳಗ್ಗೆ 10 ಗಂಟೆಯಿಂದಲೇ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಿದೆ.

Leave a Comment