Coastal Bulletin

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಎರಡನೇ 'ರಾಜ್ಯ ಬಜೆಟ್ 2023-24' ನ್ನು ನಾಳೆ ಮಂಡಿಸಲಿದ್ದಾರೆ. ಫೆಬ್ರವರಿ 17 ರಂದು ಶುಕ್ರವಾರ ಬೆಳಗ್ಗೆ 10.15ಕ್ಕೆ ಆಯವ್ಯಯ ಮಂಡಿಸಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕದ ಜನತೆಯು ಸರ್ಕಾರದ ಭರಪೂರ ಕೊಡುಗೆ/ಘೋಷಣೆಗಳ ನಿರೀಕ್ಷೆಯಲ್ಲಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಪ್ರಸಕ್ತ 2023-24ನೇ ಸಾಲಿನ ಬಜೆಟ್ ಜನಪರ ಮತ್ತು ಬಡವರ ಪರವಾಗಿರಲಿದೆ ಎಂದು ಸ್ವತಃ ತಿಳಿಸಿದ್ದಾರೆ. ಅನಿಶ್ಚಿತತೆಯಲ್ಲಿ ಬದುಕುತ್ತಿರುವ ರಾಜ್ಯದ ರೈತರನ್ನು ಆರ್ಥಿಕವಾಗಿ ಚೇತರಿಸುವ ನಿಟ್ಟಿನಲ್ಲಿ ಕೃಷಿ ವಲಯಕ್ಕೆ ಹಾಗೂ ಪ್ರಮುಖ ನೀರಾವರಿ ಯೋಜನೆಗಳ ಮೇಲೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ವರ್ಷ ರಾಜ್ಯದ ಹಣಕಾಸು ಸ್ಥಿತಿಗತಿ ಉತ್ತಮವಾಗಿದೆ ಎನ್ನಲಾಗಿದೆ. ಕೋವಿಡ್ ನಂತರ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಹೀಗಾಗಿ ಜನಸಾಮಾನ್ಯರಿಗೆ ತೆರಿಗೆ ಹೊರೆ ಬೀಳದಂತೆ ಬಜೆಟ್

ಮಂಡಿಸುವ ಹೊಣೆ ಮುಖ್ಯಮಂತ್ರಿಗಳ ಮೇಲಿದೆ. ಬ್ಯಾಂಕ್‌ಗಳಿಂದ ರೈತರಿಗೆ ದೊರೆಯುವ ಸಾಲದ ಮಿತಿ ಹೆಚ್ಚಿಸುವ ನಿರ್ಧಾರ ಈ ಬಾರಿ ಪ್ರಕಟವಾಗಬಹುದು.

ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ಶಿಕ್ಷಣ, ನೀರಾವರಿ, ಮೂಲಭೂತ ಸೌಲಭ್ಯಗಳಿಗೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಆದ್ಯತೆ ನೀಡುವ ಮೂಲಕ ಪ್ರತಿ ಪಕ್ಷಗಳಿಗೆ ಸೂಕ್ತ ಉತ್ತರ ನೀಡಲಿದ್ದಾರೆ. ತವರು ಜಿಲ್ಲೆ ಹಾವೇರಿ ಸೇರಿದಂತೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ಅಭಿವೃದ್ಧಿಗೆ, ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಮುಖ್ಯಮಂತ್ರಿಗಳು ಪ್ರಮುಖ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಗಳು ಇವೆ.

Leave a Comment