ಬೆಂಗಳೂರು: ನಟ, ನಿರ್ದೇಶಕ ಎಸ್. ನಾರಾಯಣ್ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಸಮಾಜದ ಸರ್ವ ಜನರ ಕಲ್ಯಾಣ ಬಯಸುವ ಕಾಂಗ್ರೆಸ್ ಪಕ್ಷದ ಸಿದ್ಧಾಂತ ನನಗೆ ಮೆಚ್ಚುಗೆಯಾಗಿದೆ ಎಂದು
ಎಸ್.ನಾರಾಯಣ್ ಹೇಳಿದರು.
ಕನ್ನಡ ಚಿತ್ರರಂಗದಲ್ಲಿ ನಟನಾಗಿ,ನಿರ್ದೇಶಕನಾಗಿ ಮಿಂಚಿದ ಎಸ್.ನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ಸೇರಿ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.














