Coastal Bulletin

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಯತ್ನ ವಿಫಲವಾಗಿರುವ ಬೆನ್ನಲ್ಲೇ ಈಗ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಪಕ್ಷಕ್ಕೆ ವಿದಾಯ ಹೇಳಿರುವುದು ಈಗ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ  ಭಾರಿ ಹೊಡೆತ ಬಿದ್ದಂತಾಗಿದೆ.ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಒಪ್ಪದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಭಾವಿ ನಾಯಕ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.ಅವರು

ಈ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು.ಹೈಕಮಾಂಡ್ ಶೆಟ್ಟರ್ ಅವರ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಅವರು ಅನಿವಾರ್ಯವಾಗಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ರಾಜ್ಯ ರಾಜಕಾರಣ ಕೇವಲ ಮೋದಿ ಹೆಸರಲ್ಲಿ ನಡೀತಿದೆ.ಕೆಲವರ ಹಿತಕ್ಕಾಗಿ ಪಕ್ಷವನ್ನು ಬಲಿಕೊಡಲಾಗಿದೆ,ಇದೆಲ್ಲಾ ಮೋದಿ,ಅಮಿತ್ ಶಾ ಗೆ ಗೊತ್ತಿರಲ್ಲ, ನಾವು ಚರ್ಚಿಸಿದ ವಿಷಯಗಳು ಅವರಿಗೆ ತಲುಪುವುದಿಲ್ಲ ಎಂದು ರಾಜ್ಯ ನಾಯಕರ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment