ಪುತ್ತೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನನ್ನು ಹಿಂದಕ್ಕೆ ಪಡೆಯಲು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಾಗಿದೆ. ಮಾತ್ರವಲ್ಲ ಶಾಲಾ ಪಠ್ಯಪುಸ್ತಕಗಳಲ್ಲಿಯೂ ಪರಿಷ್ಕರಣೆಯನ್ನು ಮಾಡಲು ಸರ್ಕಾರ ಮುಂದಾಗಿದೆ.
ಇದರ ವಿರುದ್ಧ ವಿಶ್ವಹಿಂದು ಪರಿಷತ್ ಬಜರಂಗದಳ ಉಗ್ರ ಹೋರಾಟವನ್ನು ಮಾಡಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಹೇಳಿಕೆ ನೀಡಿದ್ದಾರೆ.
ಎಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ ಅದರ
ವಿರುದ್ಧ ಮಾಡಿರುವ ಈ ಕಾನೂನನ್ನು ಸಮಾಜ ಸ್ವೀಕಾರ ಮಾಡಿ ನೆಮ್ಮದಿಯ ಜೀವನ ನಡೆಸುತ್ತಿದೆ. ಆದರೆ ಇದೀಗ ಸಿದ್ದರಾಮಯ್ಯ ಸರಕಾರ ಮತಾಂತರ ಕಾಯ್ದೆಯನ್ನೇ ಹಿಂಪಡೆಯುವ ಯೋಚನೆಯನ್ನು ಬಿಟ್ಟುಬಿಡಿ ಸರಕಾರಕ್ಕೆ ತಾಕೀತು ಮಾಡಿದ್ದಾರೆ.
















