breaking news

Coastal Bulletin

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಉಜಿರೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಬಿಐ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆ ಕಾರಣಕ್ಕೆ ಆರೋಪಿ ಸಂತೋಷ್ ರಾವ್‌ನನ್ನು ನಿರ್ದೋಷಿ ಎಂದು ಬೆಂಗಳೂರು ಸಿಬಿಐ ಕೋರ್ಟ್ ನ್ಯಾಯಮೂರ್ತಿ ಸಿಬಿ ಸಂತೋಷ್ ಆದೇಶ ಹೊರಡಿಸಿದ್ದಾರೆ. ಬರೋಬ್ಬರಿ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ನಿಂದ ಜೂನ್ 16ರಂದು (ಇಂದು) ಅಂತಿಮ ತೀರ್ಪು ಪ್ರಕಟಿಸಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮವತಿ ದಂಪತಿಗಳ ಎರಡನೇ ಮಗಳು ಸೌಜನ್ಯ(17) ಕಾಲೇಜ್ ಮುಗಿಸಿ ಮನೆಗೆ ವಾಪಾಸ್ ಹೋಗುವಾಗ 10-10-2012 ರಂದು ಅತ್ಯಾಚಾರ ಮಾಡಿ ಕೊಲೆ ಮಾಡಿರುವ

ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ನಂತರ ಆರೋಪಿ ಸಂತೋಷ್ ರಾವ್‌ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು. ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ.ಹಲವು ಸಂಘಟನೆಗಳು ಹೋರಾಟ ನಡೆಸಿದ ಬಳಿಕ ಪ್ರಕರಣವನ್ನು  ಸಿಐಡಿಯಿಂದ ಕೇಂದ್ರ ಸಿಬಿಐ ತನಿಖೆ ನಡೆಸಿದೆ.

Leave a Comment