ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಅರೆಸ್ಟ್‌ಗೆ ಮುಂದಾದ ಪೊಲೀಸರು

Coastal Bulletin
ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಅರೆಸ್ಟ್‌ಗೆ ಮುಂದಾದ ಪೊಲೀಸರು

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದು, ಬಂಧಿಸಲು ಮುಂದಾಗಿದ್ದಾರೆ.

ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ (Maharashtra) ಸೋಲಾಪುರ (Solapur) ಮೂಲದ ದಾನೇಶ್ ನರೋಣ ಎಂದು ತಿಳಿದುಬಂದಿದೆ.

ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ವ್ಯಕ್ತಿಯೋರ್ವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ದೂರು

ನೀಡಲು ಹಿಂದೇಟು ಹಾಕಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಮುಖಂಡ ಮನೋಹರ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆಗಿಳಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ಸದ್ಯ ಬೆಂಗಳೂರು ಪೊಲೀಸರು ಬೆದರಿಕೆ ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದು ಹೊರಟಿದ್ದು, ಆರೋಪಿಯನ್ನು ಬಂಧಿಸಲು ಮುಂದಾಗಿದ್ದರು.

Leave a Comment