ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಬುಧವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿಯಲ್ಲಿ ಮಂಗಳವಾರ ಮತ್ತು ಬುಧವಾರ ನಿರಂತರ ಮಳೆಯಾಗಲಿದ್ದು, ಅದರಲ್ಲೂ ಬುಧವಾರ ಕರಾವಳಿಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ರೆಡ್ ಅಲರ್ಟ್ ಘೋಷಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ ,
ನದಿತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಎಚ್ಚರ ವಹಿಸಬೇಕು. ಮೀನುಗಾರರು ಈ ಸಮಯದಲ್ಲಿ ಮೀನು ಹಿಡಿಯಲು ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು ಸಮುದ್ರ ತೀರಕ್ಕೆ ಹೋಗದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.














