Coastal Bulletin

ಬೆಂಗಳೂರು: ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂಬುದಾಗಿ ಪಿಯು ಬೋರ್ಡ್ ತಿಳಿಸಿದೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಮಂಡಳಿಯು, 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದಂತ ದ್ವಿತೀಯ ಪಿಯುಸಿಯ ಉತ್ತರ ಪತ್ರಿಕೆಯ ಮೌಲ್ಯ

ಮಾಪನ ಮುಕ್ತಾಯವಾಗಿದೆ. ನಾಳೆ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸೋದಾಗಿ ತಿಳಿಸಿದೆ.

ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್‌ 25 ರೊಳಗೆ ಪ್ರಕಟಿಸೋದಾಗಿ ಹೇಳಿತ್ತು. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ.

Leave a Comment