ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ- ಸಾಹಿತಿ ಭಗವಾನ್ ಬಂಧನಕ್ಕೆ ಒಕ್ಕಲಿಗರ ಸಂಘ ಆಗ್ರಹ.

Coastal Bulletin
ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ- ಸಾಹಿತಿ ಭಗವಾನ್ ಬಂಧನಕ್ಕೆ ಒಕ್ಕಲಿಗರ ಸಂಘ ಆಗ್ರಹ.

ಬೆಂಗಳೂರು : ‘ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಾಹಿತಿ ಭಗವಾನ್‌ ಅವರನ್ನು ಸರ್ಕಾರ ತಕ್ಷಣ ಭಗವಾನ್‌ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು’ ಎಂದು ರಾಜ್ಯ ಒಕ್ಕಲಿಗರ ಸಂಘ ಎಚ್ಚರಿಕೆ ನೀಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಪ್ರಚಾರಕ್ಕಾಗಿ ನೀಡಿರುವ ಹೇಳಿಕೆ ಬಗ್ಗೆ ಕೂಡಲೇ ಸಮುದಾಯದ ಕ್ಷಮೆ ಕೇಳಬೇಕು ಅಥವಾ ಸರ್ಕಾರ ಭಗವಾನ್‌ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ನಿರ್ಮಾತೃ ಕೆಂಪೇಗೌಡರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಒಕ್ಕಲಿಗ ಸಮುದಾಯದವರೇ. ರಾಜ್ಯ ಸರ್ಕಾರ ಭಗವಾನ್‌ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳದಿದ್ದರೆ ಸಂಘದ ಆಡಳಿತ ಮಂಡಳಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಮುಂದಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಸಂಘದ ಗೌರವಾಧ್ಯಕ್ಷ

ಬಿ.ಕೆಂಚಪ್ಪಗೌಡ ಮಾತನಾಡಿದರು.ಸಂಘದ ಉಪಾಧ್ಯಕ್ಷ ಎಲ್.ಶ್ರೀನಿವಾಸ್, ಕಾರ್ಯಾಧ್ಯಕ್ಷ ಎಲುವಳ್ಳಿ ರಮೇಶ್, ಕೆಂಪೇಗೌಡ ಆಸ್ಪತ್ರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ನೆಲ್ಲಿಗೆರೆ ಬಾಲು, ಸಂಘದ ನಿರ್ದೇಶಕ ಬಿ.ಪಿ.ಮಂಜೇಗೌಡ ಮತ್ತಿತರರು ಮಾತನಾಡಿದರು. ಸಂಘದ ಖಚಾಂಚಿ ಸಿ.ಎಂ.ಮಾರೇಗೌಡ, ಸಹಾಯಕ ಕಾರ್ಯದರ್ಶಿ ವೆಂಕಟರಾಮೇಗೌಡ, ನಿರ್ದೇಶಕ ಡಾ.ವಿ.ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Leave a Comment