ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು ಮಾಡಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ, ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ. ಇವರ ವಿರುದ್ಧ ಪುತ್ತೂರು ನಗರ ಠಾಣೆ Cr no.39/23 u/s 323,324,506 r/w 34 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಅಮಾನತು ಮಾಡಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಹಿನ್ನೆಲೆ ಬೇಸರಗೊಂಡು ಹಿಂದು ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್, ಡಿವಿ ಸದಾನಂದಗೌಡ ಬ್ಯಾನರ್ ಗೆ ಚಪ್ಪಲಿಹಾರ ಹಾಕಿ ಆಕ್ರೋಶ ಹೊರಹಾಕಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಬ್ಯಾನರ್ ಕಟ್ಟಿದ್ದ ಹಿಂದು ಕಾರ್ಯಕರ್ತರನ್ನು ಬಂಧಿಸಿದ್ದ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಗಂಭೀರ ಗಾಯಗೊಂಡಿರುವ ಹಿಂದು ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಆಸ್ಪತ್ರೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಹಿಂದು ಮುಖಂಡ ಅರುಣ್ ಪುತ್ತಿಲ ಸೇರಿದಂತೆ ಹಲವು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಪೊಲೀಸರ ದೌರ್ಜನ್ಯಕ್ಕೆ ರಾಜ್ಯಾದ್ಯಂತ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಬೆನ್ನಲ್ಲೇ ಇಬ್ಬರನ್ನು ಅಮಾನತುಗೊಳಿಸಲಾಗಿದೆ.