ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜೂ.21 ಕ್ಕೆ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ.

Coastal Bulletin
ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜೂ.21 ಕ್ಕೆ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ.

ಬೆಂಗಳೂರು: ಜೂ. 21 ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ.

ಜೂ.20 ರಂದು 4.55 ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ತಲುಪಲಿದ್ದಾರೆ.

ನಂತರ 5-6.55 ರ ತನಕ ಮೈಸೂರು ಮಹರಾಜ ಕಾಲೇಜು ಮೈದಾನದಲ್ಲಿ ನಡೆಯುವ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.

7.15 ಗಂಟೆಗೆ ಚಾಮುಂಡಿ ಬೆಟ್ಟದ ಪಾದದ ಬಳಿಯ ಶ್ರೀ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.

7.30 ಗೆ ಸರಿಯಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಅಲ್ಲಿ 15 ನಿಮಿಷ ಇದ್ದು, ಶ್ರೀ ಚಾಮುಂಡಿ ತಾಯಿಯ ದರ್ಶನ ಪಡೆದು, ರಾಡಿಸ್ಸನ್ ಹೋಟೆಲ್ ನಲ್ಲಿ ವಾಸ್ತವ ಮಾಡಲಿದ್ದಾರೆ.

ಜೂ.21 ಕ್ಕೆ  ಮೈಸೂರು ಅರಮನೆಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಿ, 7.45 ಕ್ಕೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.

 ಕಾರ್ಯಕ್ರಮ ಮುಗಿದ ಮೇಲೆ ಯದುವಂಶದ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಅಲ್ಲಿಂದ ನೇರ ಮೈಸೂರು ವಿಮಾನ ನಿಲ್ದಾಣ ಕ್ಕೆ ತೆರಳಿ, ವಿಶೇಷ ವಿಮಾನದಲ್ಲಿ ಕೇರಳಕ್ಕೆ ತೆರಳಿದ್ದಾರೆ.

Leave a Comment