ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದ.ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ.

Coastal Bulletin
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದ.ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ.

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ.

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ (88.02) ಮೊದಲ ಸ್ಥಾನ ಪಡೆದಿದ್ದರೆ, ಉಡುಪಿ ಜಿಲ್ಲೆ ( 86.38) ಎರಡನೇ ಸ್ಥಾನ ಪಡೆದಿದೆ. ಶೇ 49.31 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಒಟ್ಟು ಶೇ61.88 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

Leave a Comment