breaking news

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

Coastal Bulletin
ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ (HD Devegowda) ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಆಸ್ಪತ್ರೆ ಬಳಿ ಭದ್ರತೆ

ಚೆನ್ನಮ್ಮನ ಅಂತಿಮ ದರ್ಶನ ಪಡೆಯಲು ಗಣ್ಯರು ಮತ್ತು ಸಂಬಂಧಿಕರು ಮಣಿಪಾಲ್ ಆಸ್ಪತ್ರೆ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಅಲ್ಲದೇ ಜೆಡಿಎಸ್ ಕಾರ್ಯಕರ್ತರು ಸಹ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಭದ್ರತೆ ಪರಿಶೀಲನೆ ಮಾಡಿದರು.

ದೇವೇಗೌಡರ ಬೆನ್ನೆಲುಬಾಗಿದ್ದ ಚನ್ನಮ್ಮ

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ ಅವರು 1954 ಮೇ 25ರಂದು ಹೆಚ್.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ, ಹೆಚ್.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು

ಹೆಣ್ಣು ಮಕ್ಕಳಿದ್ದಾರೆ. ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಿನಂತಿದ್ದು, ಸದಾ ಕಾಲ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ದೇವೇಗೌಡರಿಗೆ ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸುವ ಮೂಲಕ ಗಟ್ಟಿಗಿತ್ತಿ ಎನಿಸಿಕೊಂಡಿದ್ದರು. ಆರು ಮಕ್ಕಳನ್ನ ಸಲಹಿದ್ದಲ್ಲದೆ, ಅವರ ಶಿಕ್ಷಣದ ಜವಾಬ್ದಾರಿ ಹೊತ್ತು ಆದರ್ಶ ಗೃಹಿಣಿಯಾಗಿದ್ದರು.

ಚನ್ನಮ್ಮ ಅವರ ಮೇಲೆ ನಡೆದಿತ್ತು ಆ್ಯಸಿಡ್ ದಾಳಿ!

2001ರ ಫೆಬ್ರವರಿ ತಿಂಗಳಲ್ಲಿ ಚನ್ನಮ್ಮ ಅವರು ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ದೇವೇಗೌಡ ಮತ್ತು ಕಾಳಮ್ಮ ದಂಪತಿಯ ಪುತ್ರಿಯ ಹಿರಿಯ ಮಗಳಾಗಿದ್ದ ಚನ್ನಮ್ಮ, ಅಂದಿನ ಕಾಲದಲ್ಲೇ SSLC ವರೆಗೆ ಶಿಕ್ಷಣ ಪೂರೈಸಿದ್ದರು. ಮನೆಯ ಹಿರಿಯ ಮಗಳಾಗಿ ನಾಲ್ವರು ತಮ್ಮಂದಿರು ಮತ್ತು ಮೂವರು ತಂಗಿಯರಿಗೆ ತಾಯಿಯಂತೆ ಆಸರೆಯಾಗಿದ್ದರು.

Leave a Comment