breaking news

Coastal Bulletin

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶ ಮತ್ತೊಮ್ಮೆ ಮುಂದೂಡಿಕೆಯಾಗಿದ್ದು, ಗಣೇಶ ಹಬ್ಬದ ಬಳಿಕ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಬುಧವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದರು.

ಇದೇ ತಿಂಗಳು 28ರಂದು ದೊಡ್ಡಬಳ್ಳಾಪುರದಲ್ಲಿ ಸರ್ಕಾರದ ಸಾಧನೆಯ ಜನೋತ್ಸವ ಆಚರಿಸಲು ತೀರ್ಮಾನಿಸಲಾಗಿತ್ತು. ಆದರೆ, ಪಕ್ಷದ ಮುಖಂಡರ ಜತೆ ಚರ್ಚಿಸಿದ ಬಳಿಕ ಗಣೇಶ ಹಬ್ಬದ ನಂತರ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ದಿನಾಂಕ ಇನ್ನೂ ನಿಗದಿ ಮಾಡಿಲ್ಲ. ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟುಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮೊದಲು ತೀರ್ಮಾನಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿತ್ತು. ನಂತರ ಇದೇ ತಿಂಗಳು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಇದೀಗ ಮತ್ತೆ ಸಮಾರಂಭ ಮುಂದೂಡಿಕೆ ಮಾಡಲಾಗಿದೆ.

Leave a Comment