ಧಾರವಾಡ : ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡನೋರ್ವ ಬಂಧನವಾದ ಘಟನೆ ನಗರದಲ್ಲಿ ಇಂದು ನಡೆದಿದೆ. ಮನೋಜ ಕರ್ಜಗಿ ಎಂಬಾತನೇ ಬಂಧಿತ ಕಾಂಗ್ರೆಸ್ ಮುಖಂಡನಾಗಿದ್ದಾನೆ.
ಬಂಧಿತ ಮನೋಜ ಸಿದ್ದರಾಮಯ್ಯ ಸರ್ಕಾರದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯಲ್ಲಿ ನಿರ್ದೇಶಕನಾಗಿದ್ದನು. ತಮ್ಮ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಮನೋಜ ಲೈಂಗಿಕ ಕಿರುಕುಳ ನೀಡಿದ್ದಾನೆ ಅಂತ ಆರೋಪಿಸಲಾಗಿದೆ.
ವಿದ್ಯಾಗಿರಿ ಬಡಾವಣೆಯಲ್ಲಿರುವ ಲೇ ಮೋರ್ಜ್ ಸ್ಪಾನಲ್ಲಿ ಘಟನೆ ನಡೆದಿದೆ. ಈ ಸಂಬಂಧ ಯುವತಿ ಲೈಂಗಿಕ ಕಿರುಕುಳ ಕುರಿತು
ದೂರು ದಾಖಲಿಸಿದ್ದಾರೆ. ಯುವತಿ ನೀಡಿದ ದೂರಿನ ಅನ್ವಯ ಮನೋಜ ಕರ್ಜಗಿಯನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯುವತಿ ಕಡೆಯವರ ಮೇಲೆ ಮನೋಜ ಕೂಡ ಪ್ರತಿ ದೂರು ದಾಖಲಿಸಿದ್ದಾನೆ. ಅಂಗಡಿಗೆ ನುಗ್ಗಿ ಯುವತಿ ಕಡೆಯವರು ಮನೋಜನ ಮೇಲೆ ಮಾರಣಾಂತಿಕ ದಾಳಿ ಮಾಡಿದ್ದರು. ಹೀಗಾಗಿ ಯುವತಿ ಕಡೆಯ ನಾಲ್ವರನ್ನ ಬಂಧಿಸಲಾಗಿದೆ.














