ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ 39 ಗಾಯತ್ರಿಪುರಂನ ಕಾರ್ಯಕರ್ತರಿಂದ ಛತ್ರಪತಿ ಶಿವಾಜಿ ಮಹಾರಾಜ್ ರವರ ಜಯಂತಿಯ ಅಂಗವಾಗಿ ಪುಷ್ಪಾರ್ಚನೆ ಮಾಡುವ ಮುಖಾಂತರ ಆಚರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯರಾದ ಶ್ರೀ ಜಯರಾಮ್ ರವರು ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು. ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು. ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ.
ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು. ಅಪ್ರತಿಮ ಯೋಧರೆನ್ನಿಸಿಕೊಂಡು ಹದಿಹರೆಯದಲ್ಲಿಯೇ ಯುದ್ಧಭೂಮಿಯಲ್ಲಿ ಪರಾಕ್ರಮ ಪ್ರದರ್ಶಿಸಿ ಮರಾಠ ರಾಜ್ಯ ಸ್ಥಾಪಿಸಿದ ಶಿವಾಜಿ ಮಹಾರಾಜ ಸ್ವಾಭಿಮಾನಿ ರಾಷ್ಟ್ರ ನಿರ್ವಣದ ಕನಸು ಕಂಡವರು.ಎಂದು ತಿಳಿಸಿದರು
ನಂತರ ಮಾತನಾಡಿದ
ಬಿಜೆಪಿ ಮುಖಂಡರಾದ ಶ್ರೀ ರೇವಣ್ಣನವರು ಸಾಮಾಜಿಕ ಕಲ್ಯಾಣಕ್ಕೆ ನೀಡಿದ ಒತ್ತು ತಲೆಮಾರುಗಳಿಂದ ಜನರಿಗೆ ಪ್ರೇರಣೆಯಾಗಿದೆ. ಸತ್ಯ ಮತ್ತು ನ್ಯಾಯದ ಮೌಲ್ಯದ ಪರವಾಗಿ ನಿಲ್ಲಬೇಕಾದ ಸಂದರ್ಭಗಳಲ್ಲಿ ಅವರು ಯಾವತ್ತೂ ರಾಜಿ ಮಾಡಿಕೊಂಡಿರಲಿಲ್ಲ. ಅವರ ಆಶಯಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ’ ಎಂದು ತಿಳಿಸಿದರು
ಈ ಕಾರ್ಯಕ್ರಮದಲ್ಲಿ ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ ಲೋಹಿತ್ ಮೈಸೂರು ನಗರ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಣಿರತ್ನಂ ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವಿಸ್ತಾರಕರಾಗಿ ಚಂದ್ರಶೇಖರ್ ಸ್ವಾಮಿ ಕ್ಷೇತ್ರದ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಬಿಜೆಪಿ ಕಾರ್ಯಕರ್ತೆ ಪೂಜ ಹಾಗೂ ದರ್ಶನ್ ಮುಂತಾದವರು ಉಪಸ್ಥಿತರಿದ್ದರು.














