ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಲಿದೆ.
ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹಾಗೆಯೇ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು
ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಒತ್ತಡದಲ್ಲಿರುವ ವಿದ್ಯಾರ್ಥಿಗಳು 080-46110007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.














