Coastal Bulletin

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫ‌ಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಹೊರ ಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಪ್ರಕಟಿಸಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಬಳಿಕ ವಿದ್ಯಾರ್ಥಿಗಳಿಗೆ ಮಂಡಳಿ ವೆಬ್‌ಸೈಟ್‌ನಲ್ಲಿ ಫ‌ಲಿತಾಂಶ

ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ಗ‌ಳಿಗೂ ಫ‌ಲಿತಾಂಶದ ಸಂದೇಶ ಬರಲಿದೆ.

Leave a Comment