Coastal Bulletin

ಬೆಂಗಳೂರು: ಪ್ರಸಕ್ತ ವರ್ಷದಿಂದಲೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ಚರ್ಚೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ವಿಧಾನ ಪರಿಷತ್‌ ಕಲಾಪದಲ್ಲಿ MLC ಎಂ.ಕೆ.ಪ್ರಾಣೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವ ನಾಗೇಶ್, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ

ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ.ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಮೌನವಾಗಿದೆ ಎಂದು ಪ್ರಾಣೇಶ್ ಸಚಿವರಿಗೆ ಕೇಳಿದ್ದರು.

Leave a Comment