ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ; ಮಹಿಳೆಯಿಂದ ಅತ್ಯಾಚಾರ ಕೇಸು ದಾಖಲು

Coastal Bulletin
ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ; ಮಹಿಳೆಯಿಂದ ಅತ್ಯಾಚಾರ ಕೇಸು ದಾಖಲು

ಬೆಂಗಳೂರು: ಬಿಬಿಎಂಪಿ (BBMP) ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ (MLA Munirathna) ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ.

ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ (Kaggalipura Police Station) ‌ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ.

ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ (Private Resort) ಅತ್ಯಾಚಾರ ನಡೆದಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ.

ಜಾತಿ ನಿಂದನೆ

ಕೇಸ್‌ ಭವಿಷ್ಯ ಇಂದು?

ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರಕ್ಕೆ (ಇಂದು) ಕಾಯ್ದಿರಿಸಿದೆ. ಈ ಪ್ರಕರಣದಲ್ಲಿ ಜೈಲಾಗುತ್ತಾ, ಜಾಮೀನು ಸಿಗುತ್ತಾ ಎಂಬುದು ಇಂದು ನಿರ್ಧಾರವಾಗಲಿದೆ.

Leave a Comment