ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮತ್ತಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಉತ್ತರ ಕರ್ನಾಟಕ, ಕರಾವಳಿ ತೀರ, ಬೆಳಗಾವಿ ವ್ಯಾಪ್ತಿಯಲ್ಲಿ ಮಳೆ ಇಳಿಮುಖವಾಗಿದ್ದು, ದಕ್ಷಿಣ ಕರ್ನಾಟಕ ವ್ಯಾಪ್ತಿಯಲ್ಲಿ ವರುಣನ ಆರ್ಭಟ ಮುಂದುವರಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಶುಕ್ರವಾರ ಅಂಗನವಾಡಿಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಾಮರಾಜನಗರ
ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿ ಅವಲೋಕಿಸಿ ರಜೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.














