Coastal Bulletin

ಬೆಂಗಳೂರು: ಹಿಜಾಬ್‌ ಕುರಿತು ತೀರ್ಪು ನೀಡಿರುವ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿರುವುದು ವಿಡಿಯೋ ವೈರಲ್‌ ಆಗಿದೆ.ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಸಂಘಟನೆ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿದೆ.

ಹಿಜಾಬ್ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ತಮಿಳುನಾಡು ಮೂಲದ ತೌಹೀದ್‌ ಜಮಾತ್‌ ಸಂಘಟನೆಯ ಮುಖಂಡ ಆರ್‌.ರೆಹ್ಮತ್‌ವುಲ್ಲಾ ಎಂಬುವರು ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಾಬ್‌ ಉಲ್ಲೇಖಿಸಿ ಪರೋಕ್ಷವಾಗಿ

ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಡಿಯೋ ಆಧಾರಿಸಿ ವಕೀಲ, ಸುಧಾ ಕಟ್ವ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Comment