ಅಭಿನವ ಹಾಲಶ್ರೀ ಸ್ವಾಮೀಜಿಯ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ-ಮುಂದಿನ 10 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ.

Coastal Bulletin
ಅಭಿನವ ಹಾಲಶ್ರೀ ಸ್ವಾಮೀಜಿಯ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ-ಮುಂದಿನ 10 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ.

ಬೆಂಗಳೂರು: ಉಡುಪಿಯ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ ಚೈತ್ರಾ ಕುಂದಾಪುರ ಗ್ಯಾಂಗ್‌ನ ಎ3 ಆರೋಪಿ ಅಭಿನವ ಹಾಲವೀರಪ್ಪ ಸ್ವಾಮೀಜಿಗೆ ನ್ಯಾಯಾಲಯವು ಜಾಮೀನು ನೀಡುವುದಕ್ಕೆ ನಿರಾಕರಣೆ ಮಾಡಿದೆ. ಇದು ಗಂಭೀರ ಪ್ರಕರಣವಾಗಿದ್ದು, ತನಿಖಾ ವಿಚಾರಣೆ ವೇಳೆ ಜಾಮೀನು ಕೊಡಲಾಗಲ್ಲವೆಂದು 10 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ 3.5 ಕೋಟಿ ರೂ. ಹಾಗೂ ಅಭಿನವ ಹಾಲಶ್ರೀ ಸ್ವಾಮೀಜಿ 1.5 ಕೋಟಿ ರೂ. ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಚೈತ್ರಾ ಕುಂದಾಪುರ ಅವರು ಬಂಧನವಾದ ವೇಳೆ ಸ್ವಾಮೀಜಿ ಬಂಧನವಾದರೆ ದೊಡ್ಡ ದೊಡ್ಡವರ ಹೆಸರು ಬಯಲಿಗೆ ಬರಲಿದೆ ಎಂದು ಹೇಳಿದ್ದರು. ಇನ್ನು ಟಿಕೆಟ್ ವಂಚನೆ ದೂರು ದಾಖಲಾಗುತ್ತಿದ್ದಂತೆ ಪರಾರಿ ಆಗಿದ್ದ ಅಭಿನವ ಹಾಲಶ್ರೀ ತಮ್ಮ ಹಾಲಸ್ವಾಮಿ ಮಠವನ್ನು ತೊರೆದು ಪೊಲೀಸರ ಕಣ್ತಪ್ಪಿಸಿ 11 ದಿನಗಳ ಕಾಲ ಪರಾರಿ ಆಗಿದ್ದರು. ನಿನ್ನೆ ಮಂಗಳವಾರ ಒಡಿಶಾದ ಕಟಕ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಅವರನ್ನು ಬೆಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

Leave a Comment