ಕರ್ನಾಟಕದ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಸೂಚನೆ: ಧಾರ್ಮಿಕ ದತ್ತಿ ಇಲಾಖೆ ಆದೇಶ

Coastal Bulletin
ಕರ್ನಾಟಕದ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಸೂಚನೆ: ಧಾರ್ಮಿಕ ದತ್ತಿ ಇಲಾಖೆ ಆದೇಶ

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ಸದ್ಯ ದೇಶ ವ್ಯಾಪಿ ಸುದ್ದಿಯಾಗಿದೆ. ಇದೇ ವಿಷಯ ಇದೀಗ ರಾಜಕೀಯ ವಾಗ್ಯುದ್ಧಕ್ಕೂ ವೇದಿಕೆ ಆಗಿದೆ. ಈ ಮಧ್ಯೆ ಇತ್ತ ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.

ಮುಜರಾಯಿ & ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ

ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ

Leave a Comment