Coastal Bulletin

ಬೆಂಗಳೂರು : ದಲಿತರ ಮನೆಯಲ್ಲಿ ಸವರ್ಣೀಯರ ವಾಸ್ತವ್ಯದ ಕುರಿತಂತೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹುಟ್ಟು ಹಾಕಿದ್ದ ವಿವಾದ ಇನ್ನೂ ತಣ್ಣಗಾಗಿಲ್ಲ. ಅನೇಕರು ಈ ಬಗ್ಗೆ ಇನ್ನೂ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಅವರು ಈಗಾಗಲೇ ಕ್ಷಮೆ ಕೇಳಿದ್ದರೂ ಅನೇಕರಿಗೆ ಈ ವಿಚಾರದಲ್ಲಿ ಬೇಸರ ಹಾಗೆಯೇ ಇದೆ. ಇತ್ತೀಚೆಗೆ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವಿಪ್ರ ಯುವ ವೇದಿಕೆಯಿಂದ ಹಂಸಲೇಖ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿ ಹಂಸಲೇಖ ಅವರಿಗೆ ನೋಟಿಸ್​ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ, ಬೆಂಗಳೂರಿನ ಬಸವನಗುಡಿ ಪೊಲೀಸರಿಂದ ಅವರಿಗೆ ಎರಡನೇ ಬಾರಿ ನೋಟಿಸ್​ ನೀಡಲಾಗಿದೆ.  

ಪೇಜಾವರ ಶ್ರೀಗಳ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ್ದು ತಪ್ಪು. ಅದಕ್ಕಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪೇಜಾವರ ಶ್ರೀಗಳ  ಬೃಂದಾವನದ ಮುಂದೆ ಬಂದು ಹಂಸಲೇಖ ಬಹಿರಂಗವಾಗಿ

ಕ್ಷಮೆ ಕೇಳಬೇಕು. ನಾಲ್ಕು ಗೋಡೆ ಮಧ್ಯೆ ಕ್ಷಮೆ ಕೇಳಿರುವುದನ್ನು ಒಪ್ಪುವುದಿಲ್ಲ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ’ ಎಂದು ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಕೃಷ್ಣ ಹೇಳಿದ್ದಾರೆ.

Leave a Comment