ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಾಡಾಳು ಪ್ರಶಾಂತ್ ಅವರ ತಂದೆ ಬಿಜೆಪಿಯ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪರಿಗೆ ಕ್ಲೀನ್ ಚಿಟ್ ನೀಡಿದ ಹೈಕೋರ್ಟ್.

Coastal Bulletin
ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಾಡಾಳು ಪ್ರಶಾಂತ್ ಅವರ ತಂದೆ ಬಿಜೆಪಿಯ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪರಿಗೆ ಕ್ಲೀನ್ ಚಿಟ್ ನೀಡಿದ ಹೈಕೋರ್ಟ್.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ 40 ಲಕ್ಷ ರೂ. ಹಣದ ಸಮೇತವಾಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ ಅಧಿಕಾರಿ ಮಾಡಾಳು ಪ್ರಶಾಂತ್ ಪ್ರಕರಣದಲ್ಲಿ ಮಾಜಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರಿಗೆ ನ್ಯಾಯಾಲಯ ಕ್ಲೀನ್‌ ಚಿಟ್ ಕೊಟ್ಟಿದೆ. ಶಾಸಕರ ಮೇಲೆ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಮಾರ್ಚ್‌ ತಿಂಗಳಲ್ಲಿ ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರ ಕಚೇರಿಯಲ್ಲಿ ಲಂಚ ಪಡೆಯುವಾಗ 40 ಲಕ್ಷ ರೂ. ಸಮೇತವಾಗಿ ಲೋಕಾಯಕ್ತರಿಗೆ ಅವರ ಪುತ್ರ ಮಾಡಾಳು ಪ್ರಶಾಂತ್ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರನ್ನು ಕೂಡ ಆರೋಪಿಯನ್ನಾಗಿ ಮಾಡಿದ್ದರು. ಆದರೆ, ಲೋಕಾಯುಕ್ತ ಪೊಲೀಸರ ಬಂಧನದಿಂದ ನಾಪತ್ತೆಯಾಗಿದ್ದ ಮಾಡಾಳು ವಿರುಪಾಕ್ಷಪ್ಪ ಅವರು ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ಸಾರ್ವಜನಿಕರ ಮುಂದೆ ಹಾಜರಾಗಿದ್ದರು. ಈ ಪ್ರಕರಣದ ವಿಚಾರಣೆಗೆ ಮಾಡಾಳು ವಿರುಪಾಕ್ಷಪ್ಪ ಅವರನ್ನು ವಶಕ್ಕೆ ಪಡೆಯಲು ನ್ಯಾಯಾಲಯದ ಅನುಮತಿ ನೀಡಿದ ನಂತರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದಾದ ನಂತರ ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡುತ್ತಿದ್ದು, ಪ್ರಕರಣದ ಅಪ್‌ಡೇಟ್ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುತ್ತಿದ್ದರು. ಆದರೆ, ಈ ಹಣಕ್ಕೆ ನಮ್ಮ ಬಳಿ ದಾಖಲೆಗಳಿವೆ ಎಂದು ಮಾಜಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಹೇಳಿಕೊಂಡಿದ್ದರು. ಆದರೆ, ಈಗ ನ್ಯಾಯಾಲಯ 40 ಲಕ್ಷ ರೂ. ನಗದು ಹಣದ ಸಮೇತವಾಗಿ ಮಾಡಾಳು

ವಿರುಪಾಕ್ಷಪ್ಪ ಅವರ ಪುತ್ರ ಸಿಕ್ಕಿಬಿದ್ದ ಪ್ರಕರಣದಲ್ಲಿ ಮಾಜಿ ಶಾಸಕರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಮಾಡಾಳ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಮಾತ್ರ ಹೈಕೋರ್ಟ್ ರದ್ದುಗೊಳಿಸಿದ್ದು, ಮಾಡಾಳ್ ಅವರ ಪುತ್ರ ಹಾಗೂ ಇತರರ ಮೇಲಿನ ಕೇಸ್ ಮುಂದುವರಿಯಲಿದೆ ಎಂದು ಹೈಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಾಡಾಳ್ ಪುತ್ರ ಪ್ರಶಾಂತ್ ನಮ್ಮ ವಿರುದ್ಧ ಷಡ್ಯಂತರ ಮಾಡಿದ್ದಾರೆ ಅಂತ ಮೊದಲೇ ಹೇಳಿದ್ದೆವು. ಈಗ ಕೋರ್ಟ್ ಆದೇಶ ಬಳಿಕ ಆದರೂ ನಮ್ಮ ವಿರುದ್ಧ ಪಿತೂರಿ ಮಾಡಿದವರಿಗೆ ಅರಿವು ಆದರೆ ಸಾಕು. ಧರ್ಮಕ್ಕೆ ಯಾವಾಗಲು ಜಯ ಸಿಗುತ್ತೆ, ನಮ್ಮ ಕಾನೂನು ಹೋರಾಟ ಮುಂದುವರೆಯುತ್ತದೆ. ವಕೀಲರು ಕೇಳಿದ ದಾಖಲಾತಿ ನೀಡಿ, ಕೋರ್ಟ್ ಕೇಳುವ ಮಾಹಿತಿ ನೀಡ್ತಿವೆ. ಪ್ರಕರಣದಲ್ಲಿ ನಮ್ಮ ತಂದೆ ಅವರನ್ನು ಎ1 ಆರೋಪಿ ಮಾಡಿದ್ದರು. ಈಗ ಕೇವಲ ತಾಂತ್ರಿಕ ಕಾರಣದಿಂದ ರಿಲೀಫ್ ಸಿಕ್ಕಿಲ್ಲ, ಇನ್ನು ಸಾಕಷ್ಟು ಅಂಶಗಳು ಇದೆ. ಕೋರ್ಟ್ ಆದೇಶ ಸಿಕ್ಕ ಬಳಿಕ ಮುಂದಿನ ಪ್ರಕ್ರಿಯೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Leave a Comment