ಉಡುಪಿ ಶ್ರೀಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ

Coastal Bulletin
ಉಡುಪಿ ಶ್ರೀಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ವಂಸ್ತ್ರಸಂಹಿತೆ ಜಾರಿಯಾಗಿದೆ. ಶ್ರೀಕೃಷ್ಣ ಮಠಕ್ಕೆ ಬರುವವರು ಸಾಂಪ್ರದಾಯಿಕವಾದ ಉಡುಗೆ ಧರಿಸಿ ಬರಬೇಕು ಎಂದು ಶಿರೂರು ಮಠದ ನೂತನ ಪರ್ಯಾಯ ಸ್ವಾಮೀಜಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿಯಾಗಿದೆ.

ಶ್ರೀಕೃಷ್ಣ ಮಠಕ್ಕೆ ಬರುವ ಪುರುಷರು ಅಂಗಿ, ಬನಿಯನ್, ಬರ್ಮುಡಾ, ಟೈಟ್ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ. ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್, ಯಾವುದೇ ಮಾಡ್ರನ್ ಬಟ್ಟೆಗಳನ್ನು ಧರಿಸಿ ಬರುವಂತಿಲ್ಲ.

ಹಾಗೆ ಬಂದಲ್ಲಿ

ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಕೊಲ್ಲೂರು, ಧರ್ಮಸ್ಥಳ, ಕಟೀಲು ದೇವಸ್ಥಾನಗಳಲ್ಲಿಯೂ ವಸ್ತ್ರಸಂಹಿತೆ ಜಾರಿಯಲ್ಲಿದೆ. ಅದೇ ರೀತಿ ಇದೀಗ ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ಕಟ್ಟುನಿಟ್ಟಾದ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ.

Leave a Comment