Coastal Bulletin

ಶಿವಮೊಗ್ಗ :ಸೀಗೆಹಟ್ಟಿ ಪ್ರದೇಶದ ಹಿಂದೂ ಸಂಘಟನೆಯ ಬಜರಂಗದಳ ಕಾರ್ಯಕರ್ತ ಹರ್ಷ (24) ಎಂಬಾತನನ್ನು ಮಾರಾಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಕೆಲವು ತಿಂಗಳ ಹಿಂದೆ ಮತ್ತೊಂದು ಧರ್ಮವನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ಹಾಕಿದ್ದ ಪ್ರಕರಣ ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಈತ ಆಕ್ಟೀವ್ ಆಗಿದ್ದ.

ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಆತನಿಗೆ

ಹಾಗಾಗ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಮೃತನ ಸಾವಿಗೆ ನ್ಯಾಯಕೊಡಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಮೆಗ್ಗಾನ್ ಶವಾಗಾರದ ಮುಂದೆ ಪ್ರತಿಭಟನೆ ನಡೆದಿದೆ.

Leave a Comment