ಶಿವಮೊಗ್ಗ, ಫೆಬ್ರವರಿ 21: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪರಿಸ್ಥಿತಿ ಮತ್ತಷ್ಟು ಹದಕೆಟ್ಟಿದೆ. ಸದ್ಯಕ್ಕೆ ಹತ್ಯೆ ಮಾಡಿದ ಐವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿ,ಮುಂಜಾಗ್ರತಾ ಕ್ರಮವಾಗಿಎ ಜಿಲ್ಲಾಡಳಿತ ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ.
ಭಜರಂಗದಳ ಕಾರ್ಯಕರ್ತ ಹರ್ಷನ ಮೃತದೇಹವನ್ನು ಮೆರವಣಿಗೆ ಮಾಡುತ್ತಿದ್ದ ವೇಳೆ ಕೆಲ ಯುವಕರು ಕಲ್ಲು ತೂರಾಟ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೆರವಣಿಗೆಯ ವೇಳೆ ನೂರಾರು ಸಂಖ್ಯೆಯಲ್ಲಿ
ಭಾಗವಹಿಸಿದ ಯುವಕರು ಕಲ್ಲು ತೂರಾಟದ ಜೊತೆಗೆ ಎರಡು ಬೈಕ್ ಮತ್ತು ಕಾರಿಗೆ ಬೆಂಕಿ ಹಚ್ಚಿದ್ದಾರೆ.
ಈ ವೇಳೆ ಪೋಲಿಸರು ಎಷ್ಟೇ ಪ್ರಯತ್ನಿಸಿದರೂ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗದೆ, ಮೂಕಪ್ರೇಕ್ಷಕರಂತೆ ನಿಂತುಬಿಟ್ಟರು.














