Coastal Bulletin

ಶಿರೂರಿನ ಟೋಲ್ ಗೇಟ್ ಬಳಿ ಭೀಕರ ಅಪಘಾತವಾಗಿದೆ. ಅತಿ ವೇಗವಾಗಿ ಬಂದ ಆಂಬ್ಯುಲೆನ್ಸ್ ಟೋಲ್ ಗೇಟ್ ನ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅತಿವೇಗವಾಗಿ ಬಂದ ಆಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ.

ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಆಂಬ್ಯುಲೆನ್ಸ್ ಶಿರೂರು ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಅದರಲ್ಲಿ ಒಬ್ಬರು ಮಹಿಳೆ ಹಾಗೂ ಇಬ್ಬರು ಪುರುಷರೆಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ನಜ್ಜು-ಗುಜ್ಜಾಗಿದೆ. 

ಅತಿ

ವೇಗವಾಗಿ ಬಂದ ಆಂಬ್ಯುಲೆನ್ಸ್ ಶಿರೂರು ಟೋಲ್ ಗೇಟ್ ನ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಟೋಲ್ ಗೇಟ್ ನ ಕಂಬ ಮುರಿದಿದೆ. 

ಆಂಬ್ಯುಲೆನ್ಸ್ ಅಪಘಾತದ ದೃಶ್ಯಗಳು ಟೋಲ್ ಗೇಟ್ ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಮಳೆಯ ನಡುವೆಯೇ ವೇಗವಾಗಿ ಬಂದ ಆಂಬ್ಯುಲೆನ್ಸ್ ನಿಯಂತ್ರಣ ಕಳೆದು ಕೊಂಡು ಟೋಲ್ ಗೇಟ್ ನ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ನೆಲಕ್ಕೆ ಬೀಳುತ್ತಿದ್ದಂತೆ ಆಂಬ್ಯುಲೆನ್ಸ್ ನಲ್ಲಿ ಇದ್ದವರು ಹಿಂಬದಿಯ ಟೋರ್ ಮೂಲಕ ಹೊರಕ್ಕೆ ಬೀಳುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

Leave a Comment