ಮಹೇಶ್ ಶೆಟ್ಟಿ ತಿಮರೋಡಿ ಬಂಧನ;ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು- ಬ್ರಹ್ಮಾವರದಲ್ಲಿ ಬಿಗುವಿನ ವಾತಾವರಣ

Coastal Bulletin
ಮಹೇಶ್ ಶೆಟ್ಟಿ ತಿಮರೋಡಿ ಬಂಧನ;ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು- ಬ್ರಹ್ಮಾವರದಲ್ಲಿ ಬಿಗುವಿನ ವಾತಾವರಣ

ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆಯೇ ತಿಮರೋಡಿಯನ್ನು ವಶಕ್ಕೆ ಪಡೆದಿದ್ದ ಉಡುಪಿ ಪೊಲೀಸರು, ಇದೀಗ ಬಂಧನ ಮಾಡಲಾಗಿದೆ ಎಂಬುದನ್ನು ಖಚಿತಪಡಿಸಿದ್ದಾರೆ.

ಇದೀಗ ಬಂಧನದ ನಂತರ, ಒಂದುವರೆ ಗಂಟೆಗೂ ಹೆಚ್ಚು ಕಾಲ ಅವರ ವಿಚಾರಣೆ ನಡೆಸಲಾಗಿದೆ. ಮಹೇಶ್ ತಿಮರೋಡಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿತ್ತು. ಪೊಲೀಸರು ಈ ಹಿಂದೆ ನೀಡಿದ್ದ ನೋಟಿಸ್‌ಗಳಿಗೆ ಅವರು ಸ್ಪಂದಿಸದ ಕಾರಣ, ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ತಿಮರೋಡಿಯವರನ್ನು ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಾಗ, ಅವರ

ಬೆಂಬಲಿಗರು ಮತ್ತು ಸ್ಥಳೀಯರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸರು ಠಾಣೆಯ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ತಿಮರೋಡಿಯವರನ್ನು ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ಬಳಿಕ, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಪ್ರಕರಣದ ಮುಂದಿನ ಬೆಳವಣಿಗೆಗಳ ಕುರಿತು ನಿರೀಕ್ಷೆ ಹೆಚ್ಚಿದ್ದು, ಪೊಲೀಸರ ತನಿಖೆಯ ಬಳಿಕ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Leave a Comment