ನಾಳೆಯ ಹವಾಮಾನ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಧಾರಾಕಾರ ಮಳೆ ನಿರೀಕ್ಷೆ

Coastal Bulletin
ನಾಳೆಯ ಹವಾಮಾನ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಧಾರಾಕಾರ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ (Weather Forecast) ಇದ್ದು, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗಲಿರುವ ಹಿನ್ನಲೆ ಯೆಲ್ಲೋ ಅಲರ್ಟ್ ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದು, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ವರುಣಾರ್ಭಟ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಹೆಚ್ಚಿನ ಪ್ರಮಾಣದ ಗಾಳಿಯೂ ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ

ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಗಾಳಿ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.

Leave a Comment