ಮಂಡ್ಯ : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ಅನ್ನದಲ್ಲಿ ವಿಷ ಉಣಿಸಿದ ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ಮದ್ದೂರಿನ ಹೊಳೆಬೀದಿಯಲ್ಲಿ ವಾಸವಿದ್ದ ಉಸ್ನಾ ಕೌಸರ್ ಆತ್ಮಹತ್ಯೆ ಮಾಡಿಕೊಳ್ಳವ ಮುನ್ನ ಹಾರಿಸ್, ಆಲಿಸಾ, , ಅನಮ್ ಫಾತಿಮಾ ಎಂಬ ಮೂರು ಮಕ್ಕಳನ್ನು ವಿಷವುಣಿಸಿ ಹತೈಗೈದಿದ್ದಾಳೆ.
ಚನ್ನಪಟ್ಟಣದಲ್ಲಿ ಕಾರ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅಖಿಲ್ ಅಹಮದ್ ಪರ ಸ್ತ್ರೀ ಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಅಲ್ಲದೆ ಅಖಿಲ್ ಮೊಬೈಲ್ ನಲ್ಲಿ
ಕೌಸರ್ ಗೆ ಪರ ಸ್ತ್ರೀಯ ಬೆತ್ತಲೆ ಫೋಟೋ ಹಾಗೂ ಆಕೆಯ ಜತೆ ಅಖಿಲ್ ಅಹಮದ್ ಇದ್ದ ಫೋಟೋಗಳು ಪತ್ತೆಯಾಗಿವೆ. ಈ ಬಗ್ಗೆ ಜಗಳವಾಗಿದ್ದು, ಖಾಸಗಿ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಉಸ್ನಾ ಕೌಸರ್ ಗಂಡ ಅಖಿಲ್ ಅಹಮದ್ ಅಕ್ರಮ ಸಂಬಂಧಕ್ಕೆ ಬೇಸತ್ತು ಕೌಸರ್ ಈ ಕೃತ್ಯ ಮಾಡಿದ್ದಾಳೆ ಎನ್ನಲಾಗಿದೆ.















