ಮೈಕ್ರೊ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಕ್ರಮ : ಪರಮೇಶ್ವರ್

Coastal Bulletin
ಮೈಕ್ರೊ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಕ್ರಮ : ಪರಮೇಶ್ವರ್

ತುಮಕೂರು: ಕೆಲ ಮೈಕ್ರೊ ಫೈನಾನ್ಸ್ ನವರು ನಿಯಮ ಉಲ್ಲಂಘನೆ ಮಾಡಿ ತಪ್ಪು ಮಾಡುತ್ತಿದ್ದಾರೆ. ಈಗಾಗಲೇ ಹಲವು ಕಡೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಮೈಕ್ರೊ ಫೈನಾನ್ಸ್ ನ ಕಿರುಕುಳವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ನವರಿಂದ ಸಾರ್ವಜನಿಕರಿಗೆ ಕಿರುಕುಳ ವಿಚಾರ ಗಂಭೀರವಾಗಿ ಪರಿಗಣಿಸಿದ್ದು, ಯಾರೇ ಸಂತ್ರಸ್ತರು ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಕೆಲ ಮೈಕ್ರೋ ಫೈನಾನ್ಸ್ ನವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಇದನ್ನು ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಪರವಾನಗಿ ಇಲ್ಲದ

ಹಣಕಾಸು ಸಂಸ್ಥೆಗಳ ಬಗ್ಗೆ ಸರ್ವೇ ಮಾಡಬೇಕಿದೆ ಎಂದರು.

ಕಾರಣಾಂತರಗಳಿಂದ ನಿನ್ನೆ ನಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳ ಸಂಸರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಇಂದು ಶ್ರೀಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ಪೂಜೆ ಸಲ್ಲಿಸಲಾಗಿದೆ. ಶ್ರೀಗಳ ಸಾಧನೆ ಇಡೀ ಜಗತ್ತಿಗೆ ಗೊತ್ತಿದೆ. ಅವರನ್ನು ನಾವು ಸರಿಸಬೇಕು. ಪುಣ್ಯ ಸರಣೆ ದಿನವನ್ನು ದಾಸೋಹ ದಿನವನ್ನಾಗಿ ಅರ್ಥಪೂರ್ಣವಾಗಿ ಆಚರಣೆ ಮಾಡಲು ಸರ್ಕಾರದ ಹಂತದಲ್ಲಿ ಚರ್ಚೆ ಮಾಡಲಾಗುವುದು ಎಂದರು.

Leave a Comment