ಬೆಂಗಳೂರು: ನ್ಯಾಯಾಧೀಶರನ್ನು ನಿಂಧಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚೇತನ್ ನನ್ನು ಶೇಷಾದ್ರಿಪುಂರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚೇತನ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಚಾರಣೆ ನಡೆಯುತ್ತಿರುವುದರಿಂದ
ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಈಗ ಸಾಧ್ಯವಿಲ್ಲ. ನಾವು ಅವರನ್ನು ಬಂಧಿಸಬೇಕೇ ಅಥವಾ ಬಿಡುಗಡೆ ಮಾಡಬೇಕೇ ಎಂದು ನಾವು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.














