ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡೋದಕ್ಕೆ ವಿನಾಯ್ತಿ ಸರ್ಕಾರ ಆದೇಶ ನೀಡಿತ್ತು. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು, ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ನಾಡಗೀತೆ ಹಾಡಲು ವಿನಾಯ್ತಿ ನೀಡಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸುತ್ತೋಲೆ ಹೊರಡಿಸಿತ್ತು.
ರಾಜ್ಯದ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಸರ್ಕಾರದ ಸುತ್ತೋಲೆ ವಿವಾದಕ್ಕೆ ಕಾರಣವಾಗಿದ್ದು ಈ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಆದೇಶವನ್ನು ಹಿಂಪಡೆದಿದೆ. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು, ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ನಾಡಗೀತೆ ಹಾಡಲು ವಿನಾಯ್ತಿ ನೀಡಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಆದೇಶ ಪ್ರತಿ ಹೊರ ಬೀಳುತ್ತಿದ್ದಂತೆ ಸಾರ್ವಜನಿಕರು, ವಿಪಕ್ಷಗಳ ನಾಯಕರು ಸರ್ಕಾರ ನಡೆಗೆ ಬೇಸರ ವ್ಯಕ್ತಪಡಿಸಿದ್ದೂ ಅಲ್ಲದೇ ಕೂಡಲೇ ಆದೇಶ ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದರು. ಈ ಬಗ್ಗೆ ಎಚ್ಚೆತ್ತ ಸರ್ಕಾರ ಸುತ್ತೋಲೆಯನ್ನು ಹಿಂಪಡೆದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್
ತಂಗಡಗಿ, ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮ್ಮಗೆ ಎಲ್ಲಾ ಶಾಲೆಗಳು ಒಂದೇ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ ಶಾಲೆ ಅಂತಾ ಹಾಕಿದ್ದಾರೆ. ಎಲ್ಲ ಶಾಲೆಗಳಲ್ಲೂ ನಾಡಗೀತೆ ಹಾಡಿಸಲು ಸುತ್ತೋಲೆ ಹೊರಡಿಸುತ್ತೇವೆ. ಸರ್ಕಾರಕ್ಕೆ ಕನ್ನಡದ ಬಗ್ಗೆ ಕಾಳಜಿ ಇದೆ ಎಂದರು.
ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಸಚಿವ ಶಿವರಾಜ್ ತಂಗಡಗಿ ಇದೇ ವೇಳೆ ಶೇಕಡಾ 60 ಪರ್ಸೆಂಟ್ ಕನ್ನಡ ಫಲಕ ಹಾಕುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ವಿಧಾನ ಸಭೆ, ಪರಿಷತ್ ಅಲ್ಲಿ ಚರ್ಚೆ ಆಗಿದೆ. ಕನ್ನಡದಲ್ಲಿ ಬೋರ್ಡ್ ಹಾಕಬೇಕು ಅಂತಾ ಚರ್ಚೆ ಆಗಿದೆ. ನಾನು ವಿಚಾರ ಮಾಡ್ತೇನೆ, ಕೆಲವರು ಸಲಹೆ ಕೊಟ್ಟಿದ್ದಾರೆ. ಕೈಗಾರಿಗೆಗಳಲ್ಲಿ ಹೆಸರು ಹಾಕುವ ಬಲು ಡಿಸ್ಪ್ಲೇ ಹಾಕುವ ಪದ್ದತಿ ಬರ್ತಾ ಇದೆ ಎಂದು ಹೇಳಿದರು.









