ಅಗ್ನಿ ಪಥ ಯೋಜನೆ ವಿರೋಧಿಸಿ, ಪ್ರತಿಭಟನೆ : 273 ರೈಲು ಸಂಚಾರ ರದ್ದು.

Coastal Bulletin
ಅಗ್ನಿ ಪಥ ಯೋಜನೆ ವಿರೋಧಿಸಿ, ಪ್ರತಿಭಟನೆ : 273 ರೈಲು ಸಂಚಾರ ರದ್ದು.

ಬೆಂಗಳೂರು: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿದೆ. ಮಂಗಳವಾರ ಉತ್ತರ ಭಾರತದಲ್ಲಿ 273 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.

103 ಎಕ್ಸ್‌ಪ್ರೆಸ್ ರೈಲುಗಳು ಮತ್ತು 167 ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ರದ್ದುಪಡಿಸಿರುವುದಾಗಿ ರೈಲ್ವೆ ಇಲಾಖೆ ಹೇಳಿದೆ.

ಪ್ರತಿಭಟನೆಯ ಕಾವು ಕಡಿಮೆಯಾಗಿದ್ದರೂ, ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಪ್ರದೇಶಗಳಲ್ಲಿ ರೈಲುಗಳ ಸಂಚಾರವನ್ನು ತಡೆಹಿಡಿಯಲಾಗಿದೆ. ಮುಂದಿನ ಎರಡು-ಮೂರು ದಿನಗಳಲ್ಲಿ ಎಲ್ಲ ರೈಲುಗಳ ಸಂಚಾರ ಯಥಾಸ್ಥಿತಿಗೆ ಬರಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

Leave a Comment