ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆ ಶಿವಕುಮಾರ್! ವಿಡಿಯೋ ವೈರಲ್‌; ಡಿಸಿಎಂ ಕೊಟ್ಟ ಸ್ಪಷ್ಟನೆ ಏನು?

Coastal Bulletin
ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆ ಶಿವಕುಮಾರ್! ವಿಡಿಯೋ ವೈರಲ್‌; ಡಿಸಿಎಂ ಕೊಟ್ಟ ಸ್ಪಷ್ಟನೆ ಏನು?

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆಯನ್ನು ಹಾಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿವಾದಕ್ಕೆ ಕಾರಣವಾಗಿದ ಬೆನ್ನಲ್ಲೆ ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದನ್ನು ಕಾಂಗ್ರೆಸ್ ಟೀಕಿಸಿತ್ತು. ಈಗ ಶಿವಕುಮಾರ್ ಅವರೇ ಆರ್‌ಎಸ್‌ಎಸ್‌ ಗೀತೆ ಹಾಡಿರುವುದಕ್ಕೆ ಬಿಜೆಪಿಗೆ ಟೀಕಿ ಮಾಡಿದೆ. ಈ ಬೆನ್ನಲ್ಲೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್, ನಾನು ಹುಟ್ಟಿನಿಂದಲೂ ಕಾಂಗ್ರೆಸ್ಸಿಗ. ಕೊನೆಯವರೆಗೂ ಕಾಂಗ್ರೆಸ್ ಪಕ್ಷದಲ್ಲೇ ಇರುವುದಾಗಿ ಹೇಳಿದ್ದಾರೆ. ಬಿಜೆಪಿ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ವಿಡಿಯೋದಲ್ಲಿ ಡಿಸಿಎಂ, "ನಮಸ್ತೇ ಸದಾ ವತ್ಸಲೇ ಮಾತೃಭೂಮಿ" ಎಂಬ ಆರ್‌ಎಸ್‌ಎಸ್‌ ಗೀತೆಯನ್ನು ಹಾಡಿದ್ದಾರೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಅವರು ಟ್ವೀಟ್‌ ಮಾಡಿ, "ನಮಸ್ತೇ ಸದಾ ವತ್ಸಲೇ ಮಾತೃಭೂಮಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕರ್ನಾಟಕ ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡುತ್ತಿರುವುದು ಕಂಡುಬಂದಿದೆ. ರಾಹುಲ್ ಗಾಂಧಿ ಮತ್ತು ಗಾಂಧಿ ವಾದ್ರಾ ಕುಟುಂಬದ ಆಪ್ತರು ಈಗ ಕೋಮಾಕ್ಕೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಏನಿದು ಘಟನೆ?

ಗುರುವಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶಿವಕುಮಾರ್

ಅವರು ಹಿಂದೆ ಆರ್‌ಎಸ್ಎಸ್ ಶಾರ್ಟ್ಸ್ (ಹಿಂದಿನ ಸಮವಸ್ತ್ರ) ಧರಿಸಿದ್ದರು ಎಂದು ಹೇಳಿದಾಗ, ಶಿವಕುಮಾರ್ ಅವರು ತಮಾಷೆಯಾಗಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದರು.

ಆರ್‌ಎಸ್‌ಎಸ್‌ ಗೀತೆ ಬಗ್ಗೆ ಡಿಕೆ ಶಿವಕುಮಾರ್ ಕೊಟ್ಟ ಸ್ಪಷ್ಟನೆ ಏನು?

"ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ಕಾಗಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು, "ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್ ಎಸ್‌ ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ" ಎಂದರು.

Leave a Comment