ಬೆಂಗಳೂರು : ಉಗ್ರ ಚಟುವಟಿಕೆಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಪ್ಯಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ 19 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಮನ್ಸೂರ್ ಖಾನ್ ಯಾಸೀರ್ ಷಾಷಾ ಸೇರಿದಂತೆ 14 ಮಂದಿಗಳನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.
ದೇಶ ವಿರೋಧಿ ಚಟುವಟಿಕೆಗಳ ಬಗ್ಗೆ
ಸುಳಿವು ಸಿಕ್ಕ ಕೂಡಲೇ ಕೆ.ಜಿ.ಹಳ್ಳಿ ಮತ್ತು ಗೋವಿಂದಪುರ ಠಾಣೆಗಳ ವ್ಯಾಪ್ತಿಯಲ್ಲಿ ಪಿಎಫ್ ಐ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರ ಮನೆ ಹಾಗೂ ಕಚೇರಿಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.














