ಮೈಸೂರು: ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ವತಿಯಿಂದ ಗಾಯತ್ರಿಪುರಂನ ಪೌರಕಾರ್ಮಿಕರ ಕಾಲೊನಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 125 ನೇ ಜಯಂತಿಯ ಪ್ರಯುಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಕ್ಕಳಿಗೆ ಸಿಹಿ ವಿತರಿಸುವ ಮುಖಾಂತರ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಎಚ್.ಜಿ ಗಿರಿಧರ್ ರವರು ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು. ಭಾರತವು ಸ್ವಾತಂತ್ರ್ಯ ಪಡೆಯಲು ಭಾರತಕ್ಕೆ ಸಹಾಯ ಮಾಡಿದ ಜರ್ಮನಿ, ಜಪಾನ್, ರಷ್ಯಾಗಳಂತಹ ದೇಶಗಳು ಬ್ರಿಟಿಷ್ ವಿರುದ್ಧ ಹೋರಾಡಲು ಮತ್ತು ಸ್ವಾತಂತ್ರ್ಯ ಪಡೆಯಲು ಬೋಸರಿಗೆ ಸಹಾಯ ಮಾಡಲು ಸಿದ್ಧವಾಗಿದ್ದವು ಎಂದು ಭಾವಿಸಲಾಗಿವೆ. ಗಾಂಧಿಯವರು ಸ್ವಾತಂತ್ರ್ಯ ಪಡೆಯುವ ಬಗೆಗೆ ಒಂದೇ ಮಾರ್ಗದಲ್ಲಿದ್ದರು. ಆದರೆ ಬೋಸ್ ಸ್ವಾತಂತ್ರ್ಯಕ್ಕೆ
ಸಶಸ್ತ್ರ ಹೋರಾಟವನ್ನೂ ಒಪ್ಪಿದ್ದರು. ಅವರ ಹೋರಾಟವು ವಿಫಲವಾದರೂ, ಭಾರತ ಸ್ವಾತಂತ್ರ ಪಡೆಯುವಲ್ಲಿ ಜನರನ್ನು ಉತ್ತೇಜಿಸಿ ತನ್ನದೇ ಆದ ಕೊಡುಗೆ ನೀಡಿದೆ ಎಂದರು.
ಕಾರ್ಯಕ್ರಮದಲ್ಲಿ ಮೈಸೂರು ನಗರ ಉಪಾಧ್ಯಕ್ಷ ಹಾಗೂ ಮಾಜಿ ಮುಡಾ ಸದಸ್ಯರಾದ ಟಿ.ರಮೇಶ್,ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಲೋಹಿತ್,ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಭರತ್, ಸಂತೋಷ್,ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಸಾಮಾಜಿಕ ಜಾಲತಾಣ ಸಂಚಾಲಕರಾದ ಸು.ಮುರಳಿ,ಮೈಸೂರು ನಗರ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಣಿರತ್ನಂ, ನಗರ ಯುವಮೋರ್ಚಾ ಉಪಾಧ್ಯಕ್ಷ ಕಾರ್ತಿಕ್ ಕುಮಾರ್,ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧನರಾಜ್, ನವೀನ್ ಶೆಟ್ಟಿ,ಬಿಜೆಪಿ ಮುಖಂಡರಾದ ನಾಣಿ ಗೌಡ ,ವಾರ್ಡ್ ಅಧ್ಯಕ್ಷರಾದ ಕಿರಣ್, ಹಾಗೂ ಆನಂದ್, ಚೇತನ್, ಅರುಣ್.ಮುಂತಾದವರು ಉಪಸ್ಥಿತರಿದ್ದರು.














