ದೆಹಲಿ: ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗಾಗಿ ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಟ್ಯಾಬ್ಲೋ ಪ್ರಸ್ತಾವನೆಗಳನ್ನು ವಿಷಯ ತಜ್ಞರ ಸಮಿತಿ ತಿರಸ್ಕರಿಸಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಕೆಲವು ರಾಜ್ಯಗಳು ಮಂಡಿಸಿದ ಸ್ತಬ್ಧಚಿತ್ರವನ್ನು ಕೇಂದ್ರವು ತಿರಸ್ಕರಿಸಿರುವುದನ್ನು ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳು ಸೇರಿದಂತೆ ವಿರೋಧ ಪಕ್ಷ ಕಾಂಗ್ರೆಸ್ ಕೂಡ ತೀವ್ರವಾಗಿ ಖಂಡಿಸಿದೆ.
ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ದ.ಕ.ಜಿಲ್ಲೆಯಲ್ಲಿ ಸ್ವಾಭಿಮಾನದ ನಡಿಗೆ ಎಂಬ ಶೀರ್ಷಿಕೆಯಡಿ ಜ.26ರಂದು ಪ್ರತಿ ತಾಲೂಕಿನಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರ ಕುದ್ರೋಳಿ ದೇವಸ್ಥಾನಕ್ಕೆ ಬಂದು ಸೇರಲಿದೆ ಹಾಗೂ ವಿವಿಧ ಸಂಘ
ಸಂಸ್ಥೆಗಳು ತಮ್ಮ ಬೆಂಬಲವನ್ನು ಸೂಚಿಸಿವೆ.
ನಾರಾಯಣ ಗುರುಗಳ ಹೆಸರನ್ನು ಅನಗತ್ಯವಾಗಿ ಪ್ರಸ್ತಾಪಿಸುತ್ತಾ, ಸಮಾಜವನ್ನು ಒಡೆಯುವ ಷಡ್ಯಂತ್ರಗಳು ಕೆಲದಿನಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಕೇರಳದ ಕಮ್ಯುನಿಸ್ಟ್ ಸರ್ಕಾರ ಉದ್ದೇಶಪೂರ್ವಕವಾಗಿ ನಾರಾಯಣ ಗುರುಗಳ ಹೆಸರನ್ನು ಬಳಸಿಕೊಂಡು ವಿವಾದ ಸೃಷ್ಠಿಸುವ ಕೆಲಸ ಮಾಡಿದೆ.














