ಬೆಂಗಳೂರು: ಜಿಎಸ್‌ಟಿ ಟ್ಯಾಕ್ಸ್ (GST Tax) ನೋಟಿಸ್‌ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು (Small Traders) ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮತ್ತು ನಾಳೆ ಹಾಲು ಮಾರಾಟ ನಿಲ್ಲಿಸಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಸಣ್ಣ ಪುಟ್ಟ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಕೊಟ್ಟ ಬೆನ್ನಲ್ಲೆ ಇಂದಿನಿಂದ ಬೇಕರಿ ಕಾಂಡಿಮೆಂಟ್‌ಗಳಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ಬಳಕೆ ಮತ್ತು ಮಾರಾಟ ನಿಲ್ಲಿಸಲಾಗಿದೆ. ಹಲವು ಕಾಂಡಿಮೆಂಟ್, ಬೇಕರಿಗಳಲ್ಲಿ ಬೆಳಗ್ಗೆಯೇ ನೋ ಟೀ ಕಾಫಿ, ಓನ್ಲಿ ಲೆಮನ್ ಟೀ, ಬ್ಲ್ಯಾಕ್ ಟೀ ಅನ್ನೋ ಬೋರ್ಡ್ಗಳನ್ನ ಹಾಕಲಾಗಿದೆ.
ಬೆಂಗಳೂರಿನ ರಾಜಾಜಿನಗರದ ಕಾಂಡಿಮೆಟ್ಸ್ಗಳಲ್ಲಿ ಇಂದು, ನಾಳೆ ಹಾಲು ಮಾರಾಟ ಸ್ಥಗಿತಗೊಳಿಸಲಾಗಿದೆ. ಟೀ,
ಕಾಫಿ ಸಿಗಲ್ಲ.. ಏನಿದ್ರೂ ಲೆಮೆನ್ ಮತ್ತು ಬ್ಲ್ಯಾಕ್ ಟೀ ಸಿಗುತ್ತೆ ಎಂದು ಗ್ರಾಹಕರಿಗೆ ಬೋರ್ಡ್ ಮೂಲಕ ತಿಳಿಸಲಾಗಿದೆ.
ಇಂದಿನಿಂದ ಮೂರು ದಿನ ಹಾಲು, ಮೊಸರು ಮಾರುವುದಿಲ್ಲ. ಟ್ಯಾಕ್ಸ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇವೆ. ಟೀ, ಕಾಫಿಯಲ್ಲಿ ಹಾಲು ಬಳಸುವುದಿಲ್ಲ. ಲೆಮೆನ್ ಮತ್ತು ಬ್ಲ್ಯಾಕ್ ಟೀ ಅಷ್ಟೇ ಮಾರುತ್ತೇವೆ ಎಂದು ಸಣ್ಣ ವರ್ತಕರು ‘ಪಬ್ಲಿಕ್ ಟಿವಿ’ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಕಾಂಡಿಮೆಂಟ್ಸ್ ವ್ಯಾಪಾರಿಗಳು ಬೋರ್ಡ್ ಕೂಡ ಹಾಕಿದ್ದಾರೆ.














