ಬೆಳಗಾವಿ :ಫೆ.27ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಮಾತನಾಡಿದ ಅವರು, ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು. ಮೊದಲ ಬಾರಿ ಪ್ರಧಾನಮಂತ್ರಿ ಕಿಸಾನ್
ಸಮ್ಮಾನ್ ನಿಧಿಯನ್ನು ಬೆಳಗಾವಿಯ ಕಾರ್ಯಕ್ರಮದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ರೋಡ್ ಶೋ ಮಾರ್ಗ ಇನ್ನೂ ಅಂತಿಮಗೊಂಡಿಲ್ಲ. ಎಸ್‌ಪಿಜಿ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು. ಪಿಎಂ-ಕಿಸಾನ್ ರೈತರ ಯೋಜನೆಯಾಗಿದ್ದು, ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ದೊಡ್ಡದು. ರೈತ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು.














