ಹುಲಿಯ ಹಲ್ಲು ಧರಿಸಿದ ದರ್ಶನ್ ಹಾಗೂ ಹುಲಿ ಚರ್ಮದ ಮೇಲೆ ಕುಳಿತ ವಿನಯ್ ಗುರೂಜಿ ವಿರುದ್ಧ ದೂರು ದಾಖಲು.

Coastal Bulletin
ಹುಲಿಯ ಹಲ್ಲು ಧರಿಸಿದ ದರ್ಶನ್ ಹಾಗೂ ಹುಲಿ ಚರ್ಮದ ಮೇಲೆ ಕುಳಿತ ವಿನಯ್ ಗುರೂಜಿ ವಿರುದ್ಧ ದೂರು ದಾಖಲು.

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಇನ್ನುಳಿದ ಸೆಲೆಬ್ರಿಟಿ ಮೇಲೂ ದೂರು ದಾಖಲಾಗಿದೆ. ನಟ ದರ್ಶನ್ ಅವರು ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ಅಲ್ಲದೇ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ದರ್ಶನ್ ಬಂಗಾರದ ಚೈನ್ ಹಾಕಿದ್ದಾರೆ. ಅದರಲ್ಲಿ ಹುಲಿಯ ಉಗುರು ಇದ್ದು, ಅವರಿಂದ ಕಾನೂನಿನ ಉಲ್ಲಂಘನೆ ಆಗಿದೆ. ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ. ಇದರಿಂದ ದರ್ಶನ್ ಹಾಗೂ ವಿನಯ್ ಗುರೂಜಿಯವರ ಮೇಲೆ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ.

ಹುಲಿಯ ಉಗುರು ಇದ್ದ ಕಾರಣಕ್ಕೆ ವರ್ತೂರು

ಸಂತೋಷ ಅವರನ್ನು ಬಂಧಿಸಿದ್ದೀರಿ. ಅದೇ ರೀತಿ ನಟ ದರ್ಶನ್, ವಿನಯ್ ಗುರೂಜಿಯನ್ನೂ ಕರೆಸಿ ವಿಚಾರಿಸಿ. ಅವರು ಧರಿಸಿದ್ದು ಅಸಲಿನೋ ಅಥವಾ ನಕಲಿಯೋ ಎಂಬುದು ಅಧಿಕಾರಿಗಳು ಪರಿಶೀಲಿಸಬೇಕು. ದರ್ಶನ್ ಅವರು ಅರಣ್ಯ ರಾಯಭಾರಿ ಆಗಿದ್ದಾರೆ. ಅವರಿಗೆ ಕನಿಷ್ಠ ಪ್ರಜ್ಞೆ ಇಲ್ಲವೇ? ಅವರು ಧರಿಸಿದ ಹುಲಿ ಉಗುರು ಅಸಲಿಯೋ ಅಥವಾ ನಕಲಿಯೋ ಅನ್ನೋದನ್ನು ಪರಿಶೀಲನೆ ಮಾಡೋದು ಅರಣ್ಯಾಧಿಕಾರಿಗಳ ಕಾರ್ಯ' ಎಂದು ಶಿವಕುಮಾರ್ ಹೇಳಿದ್ದಾರೆ.

Leave a Comment