Coastal Bulletin

ಬೆಳಗಾವಿ: ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್‌ನ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಮಾಡಿದ ಸರಕಾರಕ್ಕೆ ವಿಧಾನರಿಷತ್‌ನಲ್ಲಿ ಕಾಯಿದೆ  ಮಂಡನೆ ಮಾಡಲು ಸಾಧ್ಯವಾಗಿಲ್ಲ.

ವಿಪಕ್ಷ ಕಾಂಗ್ರೆಸ್ ಒತ್ತಡಕ್ಕೆ ಮಣಿದ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಮಸೂದೆಯನ್ನು ಸದ್ಯಕ್ಕೆ ಹಿಂತೆಗೆದುಕೊಂಡು, ಮುಂದಿನ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಿದೆ.

ಮತಾಂತರ ನಿಷೇಧ ವಿಧೇಯಕ ವಿಧಾನ ಪರಿಷತ್​​ನಲ್ಲಿ ಮಂಡನೆ ಆಗಿಲ್ಲ. ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡನೆ ಮಾಡಿಲ್ಲ.

ಆಡಳಿತ ಹಾಗೂ ಪ್ರತಿಪಕ್ಷ ನಾಯಕರ ಸಂಧಾನ ಸಭೆಯಲ್ಲಿ ಮುಂದಿನ ಅಧಿವೇಶನದಲ್ಲಿ ಬಿಲ್ ಮಂಡನೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು  ಕೊನೆದಿನವಾದ ಇಂದು (ಡಿ.24) ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯರು ಮೊದಲೇ ಹಾಜರಿದ್ದರೂ ಆಡಳಿತ ಪಕ್ಷ ಸದಸ್ಯರು 1 ಗಂಟೆ ತಡವಾಗಿ ಬಂದರು. ಹೀಗಾಗಿ, ವಿಧಾನಸಭೆಯಲ್ಲಿ ಬಿಲ್ ಮಂಡನೆಮಾಡಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ. 

Leave a Comment