ಸುರತ್ಕಲ್: ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಕೃಷ್ಣಾಪುರ ನೈತಂಗಡಿ ನಿವಾಸಿ ಜಲೀಲ್ ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಇಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಬಳಿ ಜಲೀಲ್ ಅವರ ಎದೆಯ ಭಾಗಕ್ಕೆ ಚೂರಿಯಿಂದ ಇರಿಯಲಾಗಿತ್ತು. ಜಲೀಲ್ ಮೇಲೆ ಇಬ್ಬರು ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು
ಪರಾರಿಯಾಗಿತ್ತು.
ತಕ್ಷಣ ಜಲೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.














