ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಪಕ್ಷಕ್ಕೆ ಮರಳಿದ ಜಗದೀಶ್ ಶೆಟ್ಟರ್.

Coastal Bulletin
ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಪಕ್ಷಕ್ಕೆ ಮರಳಿದ ಜಗದೀಶ್ ಶೆಟ್ಟರ್.

ದೆಹಲಿ, ಜನವರಿ 25: ಲೋಕಸಮರದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು, ಈ ಹಿಂದೆ ಕಾಂಗ್ರೆಸ್‌ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದಲ್ಲಿ ಕೊನೆಗೂ ಯಶಸ್ಸಿಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜಗದೀಶ್ ಶೆಟ್ಟರ್ ವಿಧಾನ ಪರಿಷತ್ ಸದಸ್ಯರಾಗಿರುವ ಹಿನ್ನೆಲೆ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಶೆಟ್ಟರ್ ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇ-ಮೇಲ್ ಮೂಲಕ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವುದಾಗಿ ತಿಳಿದು ಬಂದಿದೆ.

ದೆಹಲಿಯಲ್ಲಿ  ಬಿಜೆಪಿ ಪಕ್ಷ ಸೇರ್ಪಡೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

Leave a Comment