ಬೆಂಗಳೂರು, ಫೆಬ್ರವರಿ 25: ಹಿಜಾಬ್ ವಿಷಯದ ಕುರಿತು ಪೋಸ್ಟ್ ಹಾಕಿದ ಅರೋಪದಲ್ಲಿ ನಟ ಚೇತನ್ ಕುಮಾರ್ ನನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ಇಂದು ಷರತ್ತುಬದ್ಧ ಜಾಮೀನು ಮಂಜೂರಾಗಿದೆ.
ಹಿಜಾಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಮೂರ್ತಿಗಳ ವಿರುದ್ಧ ಟ್ವೀಟ್ ಮಾಡಿದ್ದರಿಂದ ನಟ ಚೇತನ್ ಕುಮಾರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ
ದಾಖಲಾಗಿತ್ತು.
ಟ್ವೀಟ್ ಆಧಾರದ ಮೇಲೆ ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದರು. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟ ಚೇತನ್ ಕುಮಾರ್ ಇಂದು ಜಾಮೀನು ಪಡೆದುಕೊಂಡಿದ್ದಾರೆ.














