ಡಾಬಾಗೆ ನುಗ್ಗಿ ಮೂವರನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

Coastal Bulletin
ಡಾಬಾಗೆ ನುಗ್ಗಿ ಮೂವರನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯ (Kalaburagi) ಹೊರವಲಯದ ಪಟ್ನಾ ಗ್ರಾಮದಲ್ಲಿ ನಡೆದಿದೆ.

ಹತ್ಯೆಗೀಡಾದವರನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಮೂರು ಜನ ಸಂಬಂಧಿಕರಾಗಿದ್ದು, ಡಾಬಾ ನಡೆಸುತ್ತಿದ್ದರು. ಡಾಬಾದಲ್ಲಿ ಕೆಲಸ

ಮಾಡುತ್ತಿದ್ದಾಗ ದುಷ್ಕರ್ಮಿಗಳು ಮೂವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಸಬ್ ಅರ್ಬನ್ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment